ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆಗಾಗಾ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಲೇ ಇದೆ. ಕೆಲವೊಮ್ಮೆ ಕಾಂಗ್ರೆಸ್ ವಲಯದಿಂದಲೂ ಈ ಮಾತು ಬರುತ್ತೆ. ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನವೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತೆ. ಇದು ಖಚಿತ ಎಂದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಥವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಸಿದ್ದರಾಮಯ್ಯ ನವೆಂಬರ್ ನಲ್ಲಿ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ ಅಂತಾ ಹೇಳಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಈ ಮಾತುಗಳು ಕೇಳಿ ಬರುತ್ತಲೇ ಇವೆ. ಆದರೆ, ಇದುವರೆಗೂ ಯಾವುದೇ ರೀತಿಯ ಬದಲಾವಣೆ ನಡೆದಿಲ್ಲ. ಸಚಿವ ಸಂಪುಟ ಪುನರ್ ರಚನೆ ಸಹ ನಡೆದಿಲ್ಲ.