ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಸಂಸತ್ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮಣಿಪುರದಲ್ಲಿ ಸತತವಾಗಿ ಹಿಂಸಾಚಾರ ನಡೆಯುತ್ತಿದೆ. ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಷ್ಟು ಸಮಯ ಪ್ರಧಾನಿ ಮೋದಿಗೆ ಇಲ್ಲವೆಂದು ಹೇಳಿದರು.
ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದಿಂದ 220 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಆದರೆ, ಕಳೆದು ಒಂದು ವರ್ಷದಿಂದ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅರಿತುಕೊಳ್ಳಲು ಪ್ರಧಾನಿಗೆ ಸಮಯವಿಲ್ಲ. ಕಳೆದ ಒಂದೂವರೆ ವರ್ಷದಿಂದ ಇಲ್ಲಿ ಅಶಾಂತಿ ನಿರ್ಮಾಣವಾಗಿದೆ.