ಪ್ರಜಾಸ್ತ್ರ ಸುದ್ದಿ
ಕೊಯಮತ್ತೂರು(Koyampattur): ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರದ ಬೃಂದಾವನ ನಗರದಲ್ಲಿ ಭಾನುವಾರ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಸ್ನೇಹಿತನೊಂದಿಗೆ ಕಾರಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಯುವಕನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಯುವತಿಯನ್ನು ಅಪಹರಣ ಮಾಡಿದ್ದಾರೆ.
ಯುವಕನಿಗೆ ಪ್ರಜ್ಞೆ ಬಂದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಿರ್ಜನ ಪ್ರದೇಶದಲ್ಲಿ ಯುವತಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮುಂಜಾನೆ ವಿಧಿ ವಿಜ್ಞಾನ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಆರೋಪಿಗಳ ಪತ್ತೆಗೆ ಉಪ ಪೊಲೀಸ್ ಆಯುಕ್ತ ಎನ್.ದೇವನಾಥನ್ ಅವರು 7 ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ.




