ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ರಾಜ್ಯ ಸಚಿವ ಸಂಪುಟದಿಂದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಭವನಕ್ಕೆ ಪತ್ರ ಬರೆದಿದ್ದು, ಇದರ ಮಾಹಿತಿಯನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
ತಕ್ಷಣದಿಂದ ಸಚಿವ ಸಂಪುಟದಿಂದ ವಜಾ ಮಾಡುವ ಸಂಬಂಧದ ಪತ್ರಕ್ಕೆ ರಾಜ್ಯಪಾಲರು ಸಹ ಸಹಿ ಹಾಕಿದ್ದಾರೆ. ಈ ಮೂಲಕ ಸಚಿವ ಸಂಪುಟದಿಂದ 2ನೇ ವಿಕೆಟ್ ಪತನವಾಗಿದೆ. ಈ ಹಿಂದೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗ 2ನೇ ವಿಕೆಟ್ ಪತನವಾಗಿದೆ.
ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎನ್ ರಾಜಣ್ಣ ನೀಡಿದ್ದ ಹೇಳಿಕೆಯಿಂದ ಹೈಕಮಾಂಡ್ ಗರಂ ಆಗಿದೆ. ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಹೇಳಿತ್ತಂತೆ. ಹೀಗಾಗಿ ಇದೀಗ ಅವರನ್ನು ವಜಾ ಮಾಡಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.