ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಕೊಡಿಗೇನಹಳ್ಳಿಯಲ್ಲಿ ಬುಧವಾರ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ, ಬಿಜೆಪಿ ಸೇರುವವರು ಸೇರುತ್ತಾರೆ. ನಾನು ಯಾಕೆ ಪಕ್ಷ ಬಿಡಬೇಕು. ಪಕ್ಷ ನನಗೆ ಏನು ತೊಂದರೆ ಮಾಡಿದೆ. ಪ್ರತಿ ಕ್ಷೇತ್ರದಲ್ಲಿ ಯಾರನ್ನಾದರೂ ಗೆಲ್ಲಿಸುವ, ಸೋಲಿಸುವ ತಾಕತ್ತು ನನಗಿದೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಸೇರುತ್ತಾರೆ ಎನ್ನುವ ಮಾತುಗಳಿಗೆ ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವವರೆಗೆ ಹಾಗೂ ಪಕ್ಷದ ನೇತೃತ್ವ ವಹಿಸಿಕೊಂಡಿರುವ ತನಕ ನನ್ನ ಭವಿಷ್ಯಕ್ಕೆ ಯಾವುದೇ ತೊಂದರೆಯಿಲ್ಲ. ರಾಹುಲ್ ಗಾಂಧಿ ಅವರ ಮತಕಳ್ಳತನ ಹೋರಾಟಕ್ಕೆ ಬೆಂಬಲಿಸುತ್ತೇನೆ. ನಾನು ಕಾಂಗ್ರೆಸ್ ಬಿಡುವುದಿಲ್ಲ. ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ, ಸ್ವತಂತ್ರವಾಗಿ ಸ್ಪರ್ಧಿಸಿದರೂ ನಾನು ಗೆಲ್ಲುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.