ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ಅವರ ಹಿನ್ನಲೆಯಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಕಾಲ ಬಂದಾಗ ಹೇಳುತ್ತೇನೆ. ಮುಖ್ಯಮಂತ್ರಿಗೆ ಶಕ್ತಿ ತುಂಬಲು ರಾಜೀನಾಮೆ ನೀಡಿದ್ದೇನೆ. ಮಾಜಿ ಸಚಿವ ಎಂದು ಕರೆಸಿಕೊಳ್ಳಲು ಸಂತೋಷ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ದೇಶದ ನಾಯಕ. ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇನೆ. ಇದು ಪಕ್ಷದ ತೀರ್ಮಾನವಾಗಿದ್ದು, ಇದನ್ನು ಪ್ರಶ್ನೆ ಮಾಡುವುದಿಲ್ಲ. ಹೈಕಮಾಂಡ್ ನಾಯಕರಿಗೆ ತಪ್ಪು ಗ್ರಹಿಕೆ ನಿವಾರಣೆ ಮಾಡಲು ದೆಹಲಿಗೆ ಹೋಗುತ್ತೇನೆ ಎಂದಿದ್ದಾರೆ.