Ad imageAd image

ರಾಹುಲ್ ಗಾಂಧಿ ಸೂಚನೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ: ಕೆ.ಎನ್ ರಾಜಣ್ಣ

Nagesh Talawar
ರಾಹುಲ್ ಗಾಂಧಿ ಸೂಚನೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ: ಕೆ.ಎನ್ ರಾಜಣ್ಣ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿದ್ದರಾಮಯ್ಯನವರು ಸಿಎಂ ಸ್ಥಾನದಲ್ಲಿ ಮುಂದುವರೆಯಲಿ ಸಿದ್ಧರಿದ್ದಾರೆ. ಪದತ್ಯಾಗಕ್ಕೂ ಸಿದ್ದರಿದ್ದಾರೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಕೇಳಲು ಬದ್ಧರಿದ್ದಾರೆ. ಅವರು ಸಿಎಂ ಆಗಿ ಮುಂದುವರೆಯಲಿ ಎಂದು ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದೆ ಹೇಳಿದ್ದೇವೆ ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಹೈಕಮಾಂಡ್ ಗೊಂದಲ ಬಗೆಹರಿಸಬೇಕು. ಇದು ರಾಜ್ಯಕ್ಕೂ ಒಳ್ಳೆಯದು. ಸಿದ್ದರಾಮಯ್ಯನವರೊಂದಿಗೆ ಚರ್ಚೆ ಮಾಡಿದಾಗ ಅವರು ಮುಕ್ತ ಮನಸ್ಸಿನಲ್ಲಿದ್ದು, ರಾಹುಲ್ ಗಾಂಧಿ ಸೂಚನೆ ಪಾಲಿಸುವುದಾಗಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯೋಣ ಎಂದಿದ್ದಾರೆ. 2013-18ರ ಅವಧಿಯ ಸಿದ್ದರಾಮಯ್ಯಗೂ ಈ ಅವಧಿ ಸಿದ್ದರಾಮಯ್ಯಗೂ ಬಹಳ ವ್ಯತ್ಯಾಸವಿದೆ ಎಂದರು.

WhatsApp Group Join Now
Telegram Group Join Now
Share This Article