ಪ್ರಜಾಸ್ತ್ರ ಸುದ್ದಿ
ಕೊಡಗು(Kodagu): ಭಾರತೀಯ ಸೇನೆಯಲ್ಲಿ ಅತ್ಯುನ್ನತ ಸ್ಥಾನ ಪಡೆದು ವೀರ ಸೇನಾನಿಗಳು ಎನಿಸಿಕೊಂಡಿರುವ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಅಗೌರವ ತೋರಿಸಲಾಗಿದೆ. ಈ ಸಂಬಂಧ ಗುರುವಾರ ಕೊಡಗು ಬಂದ್ ಗೆ ಕರೆ ನೀಡಲಾಗಿದೆ. ವಕೀಲ ವಿದ್ಯಾಧರ್ ಎಂಬಾತ ಈ ಇಬ್ಬರು ಮಹನೀರ ಬಗ್ಗೆ ಅವಮಾನಿಸಿ ಪೋಸ್ಟ್ ಮಾಡಿದ್ದ. ಇದಕ್ಕೆ ವಿರೋಧ ವ್ಯಕ್ತವಾಗಿ ಪ್ರಕರಣ ದಾಖಲಾಗಿತ್ತು. ನವೆಂಬರ್ 22ರಂದು ಕೊಡಗು ಪೊಲೀಸರು ಬಂಧಿಸಿದ್ದರು.
ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ಸಂಘಟನೆಗಳು, ಶಾಲಾ ಸಂಘಟನೆಗಳು ಸೇರಿದಂತೆ ಎಲ್ಲರೂ ಗುರುವಾರ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಮುಂಜಾನೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಕೊಡಗು ಬಂದ್ ಇರಲಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆರೋಪಿ ವಿದ್ಯಾಧರನನ್ನು 6 ತಿಂಗಳು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.