ಪ್ರಜಾಸ್ತ್ರ ಸುದ್ದಿ
ಕೋಲಾರ(Kolara): ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಹತ್ತಿರದ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಅಪಘಾತ ನಡೆದಿದ್ದು, ಮಗು ಸೇರಿ ಕಾರಿನಲ್ಲಿದ್ದ ಮೂವರು ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಸ್ವಗ್ರಾಮವಾದ ಕೆಜಿಎಫ್ ತಾಲೂಕಿನ ಕಮ್ಮಸಂದ್ರಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಇನ್ನೋವಾ ಕಾರಿನಲ್ಲಿದ್ದ ಮಹೇಶ್(45), ರತ್ನಮ್ಮ(60) ಹಾಗೂ 2 ವರ್ಷದ ಮಗು ಉದ್ವಿತ್ ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾನೆ. ಸುಜಾತಾ, ಸುನಿಲ್, ಸುಶ್ಮಿತಾ, ವಿರುತ್ ಗಾಯಗೊಂಡಿದ್ದಾರೆ. ಇತ್ತೀಚೆಗಷ್ಟೇ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇ ಶುರುವಾಗಿದೆ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.