Ad imageAd image

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ: ಕೋಳಿವಾಡ

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣವೆಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಆರೋಪಿಸಿದ್ದಾರೆ.

Nagesh Talawar
ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ: ಕೋಳಿವಾಡ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣವೆಂದು ಮಾಜಿ ಸ್ಪೀಕರ್(Ex Speaker)ಕೆ.ಬಿ ಕೋಳಿವಾಡ ಆರೋಪಿಸಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಅಲ್ಲಿ ಪ್ರಚಾರ ನಡೆಸಿತು. ಹೀಗಾಗಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ದೊಡ್ಡ ಮಟ್ಟದಲ್ಲಿ ಬಿಜೆಪಿ ಮುಡಾ(MUDA) ಹಗರಣವನ್ನು ಪ್ರಸ್ತಾಪಿಸಿದೆ. ಇದರಿಂದ ಕಾಂಗ್ರೆಸ್ ಸ್ಥಾನ ಕಡಿಮೆಯಾಗಿವೆ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಈಗಲೂ ಹೇಳುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ. ಒಂದು ಕಡೆ ವಿಪಕ್ಷಗಳು ರಾಜೀನಾಮೆ ಕೇಳುತ್ತಿದ್ದರೆ, ಮತ್ತೊಂದು ಸ್ವಪಕ್ಷೀಯ ನಾಯಕರು ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದು ಕಾಂಗ್ರೆಸ್ಸಿಗೆ ಟೆನ್ಷನ್ ತರುತ್ತಿದೆ.

WhatsApp Group Join Now
Telegram Group Join Now
Share This Article