ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ನಗರದಿಂದ ಅತೀ ಹತ್ತಿರದಲ್ಲಿ ಬಿಎಸ್ ಪಿಎಲ್ ಕಂಪನಿ ವತಿಯಿಂದ 1.50 ಕೋಟಿ ಟನ್ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದನ್ನು ಖಂಡಿಸಿ ಸೋಮವಾರ ಕೊಪ್ಪಳ ಬಂದ್ ಗೆ ಕರೆ ಕೊಡಲಾಗಿದೆ. ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ನೀಡಿರುವ ಬಂದ್ ಕರೆಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ವಿವಿಧ ಮಠಾಧೀಶರು ಸಹ ಇದಕ್ಕೆ ಧ್ವನಿಗೂಡಿಸಿದ್ದಾರೆ. ಹೀಗಾಗಿ ನಗರ ಸ್ತಬ್ಧವಾಗಿದೆ.
ಬಂದ್ ಗೆ ಕರೆ ನೀಡಿರುವುದಿಂದ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಸಂಚರಿಸಿ ಅಂಗಡಿಗಳನ್ನು ಮುಚ್ಚಿಲು ಮನವಿ ಮಾಡಿದರು. ಕಾನೂನು ಸುವ್ಯವಸ್ಥೆ ಹಿನ್ನಲೆಯಲ್ಲಿ ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಗವಿಮಠದ ಮುಂದಿನ ಕ್ರೀಡಾಂಗಣದಿಂದ ಮೆರವಣಿಗೆ ಪ್ರಾರಂಭವಾಗಿ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದೆ.