ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಕೆಎಸ್ಆರ್ ಟಿಸಿ ಬಸ್ ವೊಂದು ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಹೈದರ್ ನಗರ-ಹಟ್ಟಿ ರಸ್ತೆಯಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳು ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ, ಅದು ಪೂರ್ಣಗೊಳ್ಳದ ಪರಿಣಾಮ ಪದೆಪದೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.