ಪ್ರಜಾಸ್ತ್ರ ಸುದ್ದಿ
ಮಂಡ್ಯ: ಕೆಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಮಂಡ್ಯದ ನಗರದಲ್ಲಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾನುವಾರ ಮೀನಾಕ್ಷಿಪುರದ ಕಾವೇರಿ ಹಿನ್ನೀರಿಗೆ ಇಳಿದಿದ್ದರು. ಕೃಷ್ಣ, ಪ್ರಶಾಂತ ಹಾಗೂ ಸಿದ್ದೇಶ ಮೃತ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ನೀರಿನ ಆಳ ಹಾಗೂ ರಭಸ ತಿಳಿಯದೆ ಸ್ನಾನಕ್ಕೆ ಇಳಿದಿದ್ದ ವೇಳೆ ಮುಳಗಿದ್ದಾರೆ ಎಂದು ಹೇಳಲಾಗುತ್ತಿದೆ.
6 ವಿದ್ಯಾರ್ಥಿಗಳು ಇಲ್ಲಿಗೆ ಭೇಟಿ ಕೊಟ್ಟಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇಳವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.