ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಕೆಎಸ್ಆರ್ ಟಿಸಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಸಗಲ್ ಗ್ರಾಮದ ಹತ್ತಿರದ ರಿಂಗ್ ರೋಡ್ ಬಳಿ ನಡೆದಿದೆ. ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ(30) ಮೃತ ಬೈಕ್ ಸವಾರನಾಗಿದ್ದಾನೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯಿಂದ ನವಲಗುಂದ ಕಡೆ ಹೊರಟಿದ್ದ ಬಸ್ ಹಾಗೂ ಹುಬ್ಬಳ್ಳಿ ಕಡೆ ಹೊರಟಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ಇದಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.