ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ವೊಂದು ಮನೆಯ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಹತ್ತಿರ ನಡೆದಿದೆ. ಬಸ್ಸಿನಲ್ಲಿ 50 ಪ್ರಯಾಣಿಕರಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೊಪ್ಪ ಹಾಗೂ ಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಶೃಂಗೇರಿ ಕಡೆ ಬಸ್ ಪ್ರಯಾಣಿಸುತ್ತಿತ್ತು. ಜಲದುರ್ಗದ ಹತ್ತಿರ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಇಳಿಜಾರಿನಲ್ಲಿರುವ ಮನೆಯ ಮೇಲೆ ಬಸ್ ಉರುಳಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.