ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹಲಕುಂದಿ ಬೈಪಾಸ್ ಹತ್ತಿರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ರಾಯಚೂರು ಕಡೆ ಬಸ್ ಪ್ರಯಾಣಿಸುತ್ತಿತ್ತು. ಹಲಕುಂದಿ ಬೈಪಾಸ್ ಹತ್ತಿರ ಬಂದಾಗ ಪಲ್ಟಿಯಾಗಿದೆ.