ಮೈಸೂರು(Mysore): ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ(HDK) ಹಿಟ್ ಅಂಡ್ ರನ್ ಗಿರಾಕಿ. ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೂ ಆರೋಪ ಹೊರಿಸುವ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.
ಶಾಸಕ ಮುನಿರತ್ನ ಮೇಲೆ ಮೂರು ಪ್ರಕರಣಗಳು ದಾಖಲಾಗಿವೆ. ಎಸ್ಐಟಿಗೆ(SIT) ನೀಡಬೇಕೆಂದು ಒಕ್ಕಲಿಗ ಸಮಾಜದ ಸಚಿವರು, ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ನಾಗಮಂಗಲ ಗಲಾಟೆ, ದಾವಣಗೆರೆಯಲ್ಲಿ ಕಲ್ಲು ತೂರಾಟದಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡು ಬಂದಿದೆ. ಡಿವೈಎಸ್ಪಿ ಅವರನ್ನು ಅಮಾನತುಗೊಳಿಸಲಾಗಿದೆ. ಕೋಮು ಗಲಭೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಕುಮಾರಸ್ವಾಮಿ, ಯಡಿಯೂರಪ್ಪ(BSY) ವಿರುದ್ಧ ಡಿನೋಟಿಫಿಕೇಷನ್ ಪ್ರಕಣದಲ್ಲಿ ತನಿಖೆಗೆ ಆದೇಶವಾಗಿದೆ. ಆದರೆ, 2021ರಲ್ಲಿ ಲೋಕಾಯುಕ್ತದವರು ತನಿಖೆ ಮಾಡಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.
ಇನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂಪ(Hampa Nagarajaiah) ನಾಗರಾಜ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡುತ್ತಾರೆ ಅಂತಾ ಹೇಳಿದರು.