ಪ್ರಜಾಸ್ತ್ರ ಸುದ್ದಿ
ಕರ್ನೂಲ್(Kurnool): ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬರೋಬ್ಬರಿ 15 ಪ್ರಯಾಣಿಕರು ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬರೋಬ್ಬರಿ 15 ಪ್ರಯಾಣಿಕರು ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ನಸುಕಿನಜಾವ 3.30ರ ಸುಮಾರಿಗೆ ನಡೆದಿದೆ. ಈ ವೇಳೆ 12 ಜನರು ಬಸ್ಸಿನಿಂದ ಹಾರಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, 15 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನೂಲ್ ನಿಂದ 20 ಕಿಲೋ ಮೀಟರ್ ದೂರದಲ್ಲಿರುವ ಉಲ್ಲಿಂದಕೊಂಡ ಕ್ರಾಸ್ ಹತ್ತಿರ ಈ ಅನಾಹುತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಅನ್ನೋದರ ಕುರಿತು ತನಿಖೆಯಿಂದ ತಿಳಿದು ಬರಬೇಕಿದೆ. ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.




