ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): 2ನೇ ಮದುವೆಯಾಗಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಎರಡು ದಿನಗಳಿಂದ ಈ ವಿಚಾರ ಲಾಲು ಕುಟುಂಬ ಹಾಗೂ ಬಿಹಾರ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಅನುಷ್ಕಾ ಯಾದವ್ ಅವರೊಂದಿಗೆ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಸ್ವತಃ ತೇಜ್ ಪ್ರತಾಪ್ ಯಾದವ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ವಿಚಾರ ಹಂಚಿಕೊಂಡಿದ್ದಾರೆ. 12 ವರ್ಷಗಳಿಂದ ನಾನು ಅನುಷ್ಕಾ ಯಾದವ್ ಜೊತೆಗೆ ಸಂಬಂಧದಲ್ಲಿದ್ದೇನೆ. ಇದನ್ನು ಮೊದಲೇ ತಿಳಿಸಬೇಕು ಎಂದಿದ್ದೆ. ಆದರೆ, ಕಾಲ ಕೂಡಿ ಬಂದಿರಲಿಲ್ಲ. ಇದನ್ನು ನೀವು ಅರ್ಥ ಮಾಡಿಕೊಳ್ಳುತ್ತೀರಿ ಎಂದುಕೊಂಡಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಮಗನಿಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇರಬಹುದು. ಆದರೆ, ಕುಟುಂಬಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದರಿಂದ ಪಕ್ಷದಲ್ಲಿನ ಸಾರ್ವಜನಿಕ ಸಿದ್ಧಾಂತಕ್ಕೂ ವಿರುದ್ಧವಾಗಿದೆ. ಇದರಿಂದ ಪಕ್ಷ ಕಟ್ಟಲು ತೊಂದರೆಯಾಗುತ್ತೆ ಎಂದು ಉಚ್ಛಾಟನೆ ಪತ್ರದಲ್ಲಿ ತಿಳಿಸಲಾಗಿದೆ. ತೇಜ್ ಪ್ರತಾಪ್ ಯಾದವ್ ಜೆಡಿಯು-ಆರ್ ಜೆಡಿ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದರು. 2018ರಲ್ಲಿ ಬಿಹಾರ ಮಾಜಿ ಸಚಿವೆ ಚಂದ್ರಿಕಾ ರಾಯ್ ಅವರ ಮಗಳು ಐಶ್ವರ್ಯಳೊಂದಿಗೆ ಮದುವೆಯಾಗಿತ್ತು. ಕೆಲ ದಿನಗಳಲ್ಲೇ ಬೇರೆಯಾದರು. ಇದರ ನಡುವೆ ಫೋಟೋ, ವಿಡಿಯೋಗಳು ಸುಳ್ಳು ಎಂದು ತೇಜ್ ಪ್ರತಾಪ್ ಹೇಳುತ್ತಿದ್ದು, ನನ್ನ ಫೇಸ್ ಬುಕ್ ಅಕೌಂಟ್ ಹ್ಯಾಕ್ ಆಗಿದೆ ಎಂದಿದ್ದಾರೆ.