ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದೇವನಹಳ್ಳಿಯಲ್ಲಿ ರೈತರ ಜಮೀನು ಸ್ವಾಧೀನ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತ ಮುಖಂಡರು ಹಣ್ಣು, ತರಕಾರಿ, ಹೂವುಗಳನ್ನು ಬುಟ್ಟಿಯಲ್ಲಿ ತುಂಬಿಕೊಂಡು ವಿಧಾನಸೌಧಕ್ಕೆ ಎಂಟ್ರಿ ಕೊಟ್ಟರು. ಮುಖ್ಯಮಂತ್ರಿಗಳೊಂದಗಿನ ಚರ್ಚೆಯ ವೇಳೆ ಬೆಳೆದ ಬೆಳೆಗಳೊಂದಿಗೆ ಬಂದು ರೈತರಗೆ ಆಗುತ್ತಿರುವ ಅನ್ಯಾಯದ ಬಗ್ಗೆ ತಿಳಿಸಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕಾ ವಲಯ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಸುಮಾರು 13 ಹಳ್ಳಿಗಳ ವ್ಯಾಪ್ತಿಯ ಜಮೀನು ಸ್ವಾಧೀನಪಡಿಸಿಕೊಳ್ಳಲು 2022ರಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ಇದರಲ್ಲಿ ಕಾನೂನು ತೊಡಕುಗಳಿವೆ. ಕೋರ್ಟ್ ತೀರ್ಪು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ 10 ದಿನಗಳ ಸಮಯ ಕೇಳಲಾಗಿದೆ. ಜುಲೈ 15ರಂದು ಸಭೆ ನಡೆಸಲಾಗುವುದು ಎಂದರು.