Ad imageAd image

ಸರ್ಕಾರದಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ್

ವಕ್ಫ್ ಬೋರ್ಡ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ನಡೆದಿದೆ.

Nagesh Talawar
ಸರ್ಕಾರದಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಕ್ಫ್ ಬೋರ್ಡ್(Waqf Board) ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಬಾಂಬ್(Bomb) ಸ್ಫೋಟಗೊಂಡಿದೆ. ಲವ್ ಜಿಹಾದ್(Love Jihad) ರೀತಿಯಲ್ಲಿ ಲ್ಯಾಂಡ್(Land) ಜಿಹಾದ್ ನಡೆದಿದೆ. ಹಿಂದೆ ಟಿಪ್ಪು(Tipu Sultan) ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಜೀವನ ಕಿತ್ತುಕೊಂಡರು. ಅವರನ್ನು ಮತಾಂತರ ಮಾಡಿದರು. ಈಗ ಕಾಂಗ್ರೆಸ್ ಸರ್ಕಾರದಿಂದ ಅಧಿಕೃತವಾಗಿ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ. ಒಂದು ಸಿಎಂ ನಿವೇಶನ ಲೂಟಿ ಮಾಡುತ್ತಿದ್ದಾರೆ. ಮತ್ತೊಂದು ಮಲ್ಲಿಕಾರ್ಜುನ್ ಖರ್ಗೆ ಕುಟುಂಬ, ಇನ್ನೊಂದು ಕಡೆ ಸಚಿವ ಜಮೀರ್ ಅಹ್ಮದ್ ಖಾನ್ ಭೂಮಿ ಲೂಟಿ ಮಾಡಿ ವಕ್ಫ್ ಗೆ ಸೇರಿಸಿ ಆಧುನಿಕ ಟಿಪ್ಪು ಸುಲ್ತಾನ್ ಆಗಲು ತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article