ಪ್ರಜಾಸ್ತ್ರ ಸುದ್ದಿ
ಕಾರವಾರ(Karawara): ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಕಳೆದ ಎರಡು ದಿನಗಳಿಂದ ಇಡಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ನಗದು, ಕೆಜಿಗಟ್ಟಲೇ ಚಿನ್ನಾಭರಣ ಸಿಕ್ಕಿವೆ ಎಂದು ತಿಳಿಸಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಎರಡು ದಿನಗಳ ಕಾಲ ದಾಖಲೆಗಳ ಪರಿಶೀಲನೆ ಹಾಗೂ ತಪಾಸಣೆ ನಡೆಸಲಾಯಿತು.
ಪರಿಶೀಲನೆ ಸಂದರ್ಭದಲ್ಲಿ 1.68 ಕೋಟಿ ರೂಪಾಯಿ ನಗದು, 6.75 ಕೆಜಿ ತೂಕದಷ್ಟು ಚಿನ್ನಾಭರಣ ಹಾಗೂ ಚಿನ್ನದ ಬಿಸ್ಕತ್ ಗಳು ಪತ್ತೆಯಾಗಿವೆ. ಇನ್ನು ಕಾರವಾರ, ದೆಹಲಿ, ಗೋವಾ, ಮುಂಬೈ ಸೇರಿ ಇತರೆ ಕಡೆ ಬೇಲಿಕೇರಿ ಅದಿರು ಪ್ರಕರಣದಲ್ಲಿನ ಆರೋಪಿಗಳ ಮನೆ, ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ.