ಪ್ರಜಾಸ್ತ್ರ ಸುದ್ದಿ
ಕಾರವಾರ(Karawara): ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ. ಸದಾಶಿವಘಡದಲ್ಲಿರುವ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮನೆಯ ಹೊರಗಿನಿಂದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ತೆರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೇಲೆಕೇರಿಯ ಕಬ್ಬಿಣದ ಅದಿರು ಅಕ್ರಮ ವರ್ಗಾವಣೆ ಪ್ರಕರಣವೂ ಇವರ ಮೇಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇವರಿಗೆ 7 ವರ್ಷ ಜೈಲುಶಿಕ್ಷೆ, 9 ಕೋಟಿ ರೂಪಾಯಿ ದಂಡ ವಿಧಿಸಲಾಗಿತ್ತು. ಆದರೆ, ಇದನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಕಲಾಪದಲ್ಲಿ ಭಾಗವಹಿಸದಂತೆ ನಿರ್ಬಂಧವಿಧಿಸಿದೆ.