ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಕಳೆದ ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಹಾಗೂ ಸಹೋದರರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಮತ್ತೆ ದಾಳಿ ನಡೆಸಲಾಗಿದೆ. 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆನ್ಲೈನ್ ಗೇಮಿಂಗ್, ವಿದೇಶಿ ಕರೆನ್ಸಿ, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಳಿ ನಡೆಸಲಾಗುತ್ತಿದೆ.
6 ಕಾರುಗಳಲ್ಲಿ 10ಕ್ಕೂ ಹೆಚ್ಚಿ ಅಧಿಕಾರಿಗಳು ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಅಂದು ನಡೆದ ದಾಳಿಯಲ್ಲಿ 1 ಕೋಟಿ ರೂಪಾಯಿ ವಿದೇಶಿ ಕರೆನ್ಸಿ, 12 ಕೋಟಿ ರೂಪಾಯಿ ನಗದು, 6 ಕೋಟಿ ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್, 2 ಲಾಕರ್ ಜಪ್ತಿ ಮಾಡಲಾಗಿತ್ತು. ಇದೀಗ ಮತ್ತಷ್ಟು ಪರಿಶೀಲನೆ ನಡೆಸಲಾಗುತ್ತಿದೆ.