ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ರಾಜ್ಯದಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರು ರಕ್ಷಣೆಗೆ ಸಂಬಂಧಿಸಿದಂತೆ ಅಕ್ಕ ಪಡೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಳೆಗಾಲದ ಅಧವೇಶನದ 3ನೇ ದಿನವಾದ ಬುಧವಾರ, ಚಿಕ್ಕನಾಯಕನಹಳ್ಳಿಯ ಜೆಡಿಎಸ್ ಶಾಸಕ ಸಿ.ಬಿ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಅವರು ಈ ರೀತಿಯಾಗಿ ಉತ್ತರಿಸಿದರು.
ಆಗಸ್ಟ್ 15ರಿಂದ ಬೆಳಗಾವಿ, ಮೈಸೂರು, ಮಂಗಳೂರಲ್ಲಿ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗುವುದು. ಇನ್ನು ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿ ಕೆಲಸ ಮಾಡುತ್ತಿದೆ. ಬೆಂಗಳೂರಲ್ಲಿ 4 ಸಿಡಬ್ಲುಸಿ, ಪ್ರತಿ ಜಿಲ್ಲೆಗಳಲ್ಲಿ 1 ಸಿಡಬ್ಲುಸಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಬಂದ ತಕ್ಷಣ ಸ್ಪಂದಿಸಲಾಗುತ್ತದೆ. ದಿನದ 24 ಗಂಟೆಯೂ ಕೆಲಸ ಮಾಡುತ್ತದೆ ಎಂದು ಹೇಳಿದರು.