ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitrdurga): ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು(Leopard) ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ನಗರದ ಹೊರವಲಯದ ಹೊಸ ಹೈವೆ ತಮಟಕಲ್ಲು ಬೈಪಾಸ್ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿರತೆಗೆ ಡಿಕ್ಕಿ ಹೊಡೆದ ಬಳಿಕ ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ.
ಚಿತ್ರದುರ್ಗದ ಸುತ್ತಲೂ ಹೀಗೆ ಪ್ರಾಣಿಗಳು ಬಲಿಯಾಗುತ್ತಿರುವುದಕ್ಕೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್, ಸಂಚಾಲಕ ಟಿ..ರುದ್ರಮುನಿ ಆತಂಕ ವ್ಯಕ್ತಪಡಿಸಿದ್ದಾರೆ. ಅಪಘಾತ(Accident) ಮಾಡಿ ಹೋಗುತ್ತಿರುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ತಮಟಕಲ್ಲು ಹತ್ತಿರ ಕರಡಿ(Bear) ಸಹ ಅಪಘಾತಕ್ಕಿಡಾಗಿದೆ.