ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಜ್ಯದಲ್ಲಿ ಬರೋಬ್ಬರಿ 48 ಶಾಸಕರು, ಜನಪ್ರತಿನಿಧಿಗಳ ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಶುಕ್ರವಾರ ಮಾಧ್ಯಮದವರೊಂದಿಗೆ ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಆಡಳಿತ ನೈತಿಕ ಅಧನಪತನಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಮನಿ ಕ್ರೈಸಿಸ್ ಇತ್ತು. ಈಗ ಹನಿ ಕ್ರೈಸಿಸ್ ಶುರುವಾಗಿದೆ. ಒಬ್ಬ ಸಚಿವ ಸಂಪುಟ ಸಚಿವರು ವಿಧಾನ ಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದೆ. ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ನೈತಿಕತೆ ಕಳೆದುಕೊಂಡಿರುವ ಅಪರಾಧಿ ಸಚಿವ ಸಂಪುಟ ಸಚಿವಾಲಯ ರಾಜ್ಯದಲ್ಲಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.