ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಶಾಸಕ ಅಶೋಕ ಮನಗೂಳಿಯವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಶಾಸಕರು, ಪೋಲಿಯೋ ಅನ್ನೋ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಕೈಜೋಡಿಸೋಣ. ಆರೋಗ್ಯಕರ ಭವಿಷ್ಯಕ್ಕಾಗಿ ನಾವು ಇಂದು ತೆಗೆದುಕೊಳ್ಳುವ ಸಣ್ಣ ಹೆಜ್ಜೆ ಅತ್ಯಂತ ಮಹತ್ವದ್ದು ಎಂದರು. ಈ ವೇಳೆ ತಹಶೀಲ್ದಾರ್ ಕರೆಪ್ಪ ಬೆಳ್ಳಿ, ಆಸ್ಪತ್ರೆಯ ವೈದ್ಯಾಧಿಕಾರಿ ಶಂಕರ ದೇಶಮುಖ ಸೇರಿದಂತೆ ತಾಲೂಕು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಉಪಸ್ಥಿರಿದ್ದರು.




