ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಜಿಲ್ಲೆಯ ಸೇಡಂ ತಾಲೂಕಿನ ಮುಳಖೇಡ ಗ್ರಂಥಪಾಲಕಿ ಭಾಗ್ಯವತಿ ಅಗ್ನಿಮಠ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಇದು ಆತ್ಮಹತ್ಯೆಯಲ್ಲ. ಸರ್ಕಾರ ಪ್ರಾಯೋಜಕತ್ವದ ಕೊಲೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ನ್ಯಾಯಕ್ಕಾಗಿ ನೌಕರರು ಹೋರಾಟ ಮಾಡುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕಲು ಎಸ್ಐಟಿ, ಆಯೋಗ ರಚನೆ ಮಾಡುವ ಸಾಧ್ಯತೆಯಿದೆ. ಡೆತ್ ನೋಟ್ ಮುಚ್ಚಿಹಾಕಿದ್ದಾರೆ. ಎಂದಿನಂತೆ ಕಾಂಗ್ರೆಸ್ಸಿನವರು ಮನೆಗೆ ಹೋಗಿ ಹಣ ಕೊಟ್ಟು ಹೊಂದಾಣಿಕೆ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.