ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ಈ ಮೂಲಕ ದೇವೇಗೌಡರ ಕುಟುಂಬಕ್ಕೆ ಮರ್ಮಾಘಾತವಾಗಿದೆ. ಶುಕ್ರವಾರ ಪ್ರಕರಣದ ತೀರ್ಪು ಪ್ರಕಟಿಸಿದ್ದ ಕೋರ್ಟ್ ಪ್ರಜ್ವಲ್ ದೋಷಿ ಎಂದು ಹೇಳಿತ್ತು. ಶನಿವಾರ ಶಿಕ್ಷೆ ಪ್ರಕಟಿಸುವುದಾಗಿ ಹೇಳಿದ್ದ ಕೋರ್ಟ್ ಇಂದು ಜೀವಾವಧಿ ಶಿಕ್ಷೆ, 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಬಿ.ಎನ್ ಜಗದೀಶ್ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಕೆಲಸ ನಿರ್ವಹಿಸಿದ್ದು, ಪ್ರಜ್ವಲ್ ಗೆ ಶಿಕ್ಷೆಯಾಗಬೇಕು ಎಂದು ವಾದ ಮಂಡಿಸಿದ್ದರು. ರೇವಣ್ಣ ಪರ ವಕೀಲೆ ನಳಿನಾ ಮಾಯೇಗೌಡ ವಾದ ಮಂಡಿಸಿದ್ದರು. ಇನ್ನು ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಹೋಗುವ ಸಾಧ್ಯತೆಯಿದೆ. ಶಿಕ್ಷೆಗೆ ಒಳಗಾಗುವ ವ್ಯಕ್ತಿಯ ಕಡೆಯಿಂದ ನಡೆಯುವ ಸಹಜ ಪ್ರಕ್ರಿಯೆಯಿದೆ. ಇನ್ನೊಂದು ಪ್ರಕರಣದ ವಿಚಾರಣೆ ನಡೆಯಲಿದೆ. ಆದರೆ, ಅದರಲ್ಲಿರುವ ಮಹಿಳೆ ಯಾವುದೋ ಆಮಿಷಕ್ಕೆ ಒಳಗಾಗಿ ಅಥವ ಇನ್ಯಾವುದೋ ಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.