ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಗೆ ಮಹಿಳೆಯೊಬ್ಬರು ಜೀವ(Death Threat) ಬೆದರಿಕೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. 10 ದಿನಗಳಲ್ಲಿ ಅಧಿಕಾರದಿಂದ ಕೆಳಗೆ ಇಳಿಯದಿದ್ದರೆ ಎನ್ ಸಿಪಿ ನಾಯಕ ಬಾಬಾ ಸಿದ್ದೀಕಿಗೆ ಆದ ಸ್ಥಿತಿ ಆಗಲಿದೆ ಎಂದು ಬೆದರಿಕೆ ಹಾಕಿದ್ದಳಂತೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಮುಂಬೈ ಪೊಲೀಸ್ ಸಂಚಾರ ದಳದ ಕಂಟ್ರೋಲ್ ರೂಮಿಗೆ ಅಪರಿಚಿತ ನಂಬರ್ ನಿಂದ ಬೆದರಿಕೆ ಸಂದೇಶ ಬಂದಿತ್ತು ಅಂತಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಮಹಿಳೆಯನ್ನು ಬಂಧಿಸಲಾಗಿದೆಯಂತೆ. ಇನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ(Yogi Adityanath) ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.