Ad imageAd image

ಭಗವಾನ್ ಬುದ್ಧ ಜ್ಞಾನದ ಬೆಳಕು: ಸಂಗಮೇಶ ಬಬಲೇಶ್ವರ

Nagesh Talawar
ಭಗವಾನ್ ಬುದ್ಧ ಜ್ಞಾನದ ಬೆಳಕು: ಸಂಗಮೇಶ ಬಬಲೇಶ್ವರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅಸಮಾನತೆ, ಕಂದಾಚಾರಗಳಂತಹ ಆಚರಣೆಗಳಿಂದ ನರಳುತ್ತಿದ್ದ ಜಗತ್ತಿಗೆ ಜ್ಞಾನದ ಬೆಳಕಾಗಿ ಶಾಂತಿ, ಸಮಾನತೆಯ ದಾರಿ ತೋರಿದವರು ಭಗವಾನ್ ಬುದ್ಧರು  ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬುದ್ಧ-ಬಸವ-ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಅನುಕರಣೆ ಮಾಡಬೇಕು. ಜಗತ್ತಿಗೆ ಶಾಂತಿ ಬೋಧಿಸಿದ ಬುದ್ಧನ ಆದರ್ಶ ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಬುದ್ಧ-ಬಸವ-ಅಂಬೇಡ್ಕರ್ ಅವರ ಆದರ್ಶಗಳು ಇಡೀ ಜಗತ್ತಿಗೆ ಸಾರ್ವಕಾಲಿಕವಾಗಿವೆ. ಅವರ ಆದರ್ಶ, ವಿಚಾರಗಳು, ಚಿಂತನೆಗಳನ್ನು ತಿಳಿದುಕೊಳ್ಳುವ ಅಗತ್ಯತೆ ಇದೆ. ಶಾಲಾ ಕಾಲೇಜಿನ ಮಕ್ಕಳಿಗೆ ಬುದ್ಧರ ತತ್ವಗಳನ್ನು, ಚಿಂತನೆಗಳನ್ನು ತಿಳಿಸಬೇಕು. ಬುದ್ಧ ನಮ್ಮೆಲ್ಲರ ಮನೆಯ ಮನದ ಬೆಳಕು. ಜಗತ್ತಿನ ಭರವಸೆಯ ಬೆಳಕು ಎಂದು ಹೇಳಿದರು.

ಉಪನ್ಯಾಸ ನೀಡಿದ ಬೌದ್ಧ ತತ್ವಜ್ಞಾನಿ ಸಂಶೋಧಕರಾದ ಅನ್ನಪೂರ್ಣ ಬೆಳ್ಳೆನವರ ಅವರು ಬುದ್ಧನ ಜೀವನ ಚರಿತ್ರೆಯ ಕುರಿತು ವಿಸ್ತಾರವಾಗಿ ಮಾಹಿತಿ ನೀಡಿ, ಅನೇಕ ಶಾಂತಿ ತತ್ವಗಳನ್ನು ಬುದ್ಧ ನೀಡಿದ್ದಾರೆ. ಅವರು ನೀಡಿದ ಪಂಚಶೀಲ ತತ್ವಗಳನ್ನು ಪಾಲಿಸುವ ಮೂಲಕ ಜೀವನ ಸಾರ್ಥಕತೆ ಹೊಂದಬೇಕು ಎಂದು ಅವರು ಹೇಳಿದರು. ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿಗಳಾದ ಕೆ.ಎಫ್.ಅಂಕಲಗಿ, ಎಲ್ಲ ವೈಭೋಗವನ್ನು ತ್ಯಜಿಸಿ ಜ್ಞಾನಮಾರ್ಗವನ್ನು ತೋರಿಸಿದ ಭಗವಾನ್ ಬುದ್ಧ, ಬಾಲ್ಯದಲ್ಲಿಯೇ ತಮ್ಮ ಅರಮನೆಯ ಸೇವಕರನ್ನು ಬಂಧುಗಳಾಗಿ ಕಾಣುವ ಗುಣ ಹೊಂದುವ ಮೂಲಕ ಜನಾನುರಾಗಿಯಾಗಿದ್ದರು. ಜನರು ಬುದ್ಧನನ್ನು ಪ್ರೀತಿಸುತ್ತಿದ್ದರು. ಇಂತಹ ಗುಣಗಳನ್ನು ಹೊಂದಿದ ಬುದ್ಧನ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪಾಲನೆಗೆ ಮುಂದಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬುದ್ಧ ವಿಹಾರದಿಂದ ಆರಂಭಗೊಂಡ ಭಗವಾನ್ ಬುದ್ಧ ಭಾವಚಿತ್ರ ಮೆರವಣಿಗೆಗೆ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಿಂಗಪ್ಪ ಗೋಠೆ ಚಾಲನೆ ನೀಡಿದರು. ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ನಾರಾಯಣಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಬುದ್ಧ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಎಡಹಳ್ಳಿ, ಜಿಲ್ಲಾ ಮಟ್ಟದ ವಿವಿಧ  ಇಲಾಖೆಯ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article