ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯಿಂದಲೇ ಪಿಎಸ್ಐ, ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಆಗ ಪಿಎಸ್ಐ, ಓರ್ವ ಕಾನ್ಸ್ ಟೇಬಲ್ ಪರಾರಿಯಾದ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಠಾಣೆಯಲ್ಲಿ ನಡೆದಿದೆ. ಪಿಎಸ್ಐ ಜಗದೇವಿ, ಪೇದೆ ಮಂಜುನಾಥ್ ಪರಾರಿಯಾಗಿದ್ದಾರೆ. ಮತ್ತೋರ್ವ ಪೇದೆ ಅಂಬರೀಶನನ್ನು ವಶಕ್ಕೆ ಪಡೆಯಲಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ವಿಚಾರದಲ್ಲಿ ಸಂತ್ರಸ್ತೆಯಿಂದ 75 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಈ ಮೊದಲು 5 ಸಾವಿರ ರೂಪಾಯಿ ಪಡೆದಿದ್ದಾರೆ. ಇಂದು 70 ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.