ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪಳ ನಗರಸಭೆ ಅಧ್ಯಕ್ಷ ಹಾಗೂ ಸಹೋದರನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದಾರೆ. ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಇವರ ಸಹೋದರ ಶಕೀಲ್ ಪಟೇಲ್ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ.
ಕಳೆದ ವರ್ಷದ ನಡೆದ 300ಕ್ಕೂ ಹೆಚ್ಚು ವಿವಿಧ ಕಾಮಗಾರಿಯಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದೇ ವಿಚಾರವಾಗಿ ಕೆಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು, ಹೀಗಾಗಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ತನಿಖೆ ನಡೆಯುತ್ತಿದೆ. ಇದಾದ ಬಳಿಕ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.