ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರ ಮನೆ ಸೇರಿದಂತೆ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದರು.
ಬೆಂಗಳೂರಿನಲ್ಲಿ 7 ಕಡೆ, ಕೊಡಗಿನ 3 ಕಡೆ ಹಾಗೂ ವಸತಿ ಇಲಾಖೆ ಸಿಬ್ಬಂದಿಯೊಬ್ಬರ ಮನೆ ಸೇರಿ 9 ಕಡೆ ದಾಳಿ ನಡೆಸಲಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಸಿಕ್ಕಿದ್ದ ಲೆಕ್ಕಪತ್ರಗಳನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸಿ ತನಿಖೆ ನಡೆಸುವಂತೆ ಇಡಿ ಹೇಳಿತ್ತು. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇದಕ್ಕೂ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಗೂ ಸಂಬಂಧವಿದೆಯಾ ಅನ್ನೋದು ತಿಳಿದು ಬರಬೇಕಿದೆ.




