ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಲೋಕೋಪಯೋಗಿ ಇಲಾಖೆಯ ಬಳ್ಳಾರಿಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಅಮೀನ್ ಮುಕ್ತರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿನ ಮನೆ ಹಾಗೂ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಕಲಬುರಗಿ ನಗರದ ಹುಸೇನ್ ಗಾರ್ಡನ್ ಹತ್ತಿರದ ಮನೆ, ಏಷಿಯನ್ ಲೈಫ್ ಸ್ಟೈಲ್ ಅಪಾರ್ಟ್ ಮೆಂಟ್ ಮೇಲೆ ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್, ಬಳ್ಳಾರಿ ಎಸ್ಪಿ ಸಿದ್ದರಾಜು ಸೇರಿದಂತೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆಗಳು, ಆಸ್ಪತ್ರೆ, ಕಟ್ಟಡ, ಪೆಟ್ರೋಲ್ ಬಂಕ್, ಜಮೀನುಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಇದರ ಜೊತೆಗೆ ಬಂಗಾರದ ಆಭರಣಗಳು ಪತ್ತೆಯಾಗಿವೆ.