ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ಅದೇ ರೀತಿಯ ನಗರದಲ್ಲಿರುವ ರೇಣುಕಾ ಸಾತಾರ್ಲೆ ಅವರ ನಿವಾಸದ ಮೇಲೆಯೂ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ್ ಹಾಗೂ ಇನ್ಸ್ ಪೆಕ್ಟರ್ ಅವರ ನೇತೃತ್ವದಲ್ಲಿ, ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಈ ಮನೆ ಸೊಲ್ಲಾಪುರ ನಗರದ ಕೆಎಚ್ ಬಿ ಪ್ರದೇಶದಲ್ಲಿದೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲಾತಿಗಳ ಪರಿಶೀಲನೆ ಮುಂದುವರೆದಿದೆ.