ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಶೃಂಗೃರಿ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ, ಫಾರಂ ಹೌಸ್ ಸೇರಿದಂತೆ ನಾಲ್ಕು ಕಡೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ದಾಳಿ ಮಾಡಿದ್ದಾರೆ. ಒಂದು ವಾರದ ಹಿಂದೆ ಇವರ ವಿರುದ್ಧ ಲೋಕಾಯುಕ್ತರು ಎಫ್ಐಆರ್ ದಾಖಲಿಸಿದ್ದರು. ಇದೀಗ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ
ಕೊಪ್ಪ ಮೂಲದ ದಿನೇಶ್ ಎಚ್.ಕೆ ಎಂಬುವರು ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಬಗ್ಗೆ ತನಿಖೆಗೆ ಆದೇಶ ನೀಡಿತ್ತು. ಹೀಗಾಗಿ ಶಾಸಕ ಟಿ.ಡಿ ರಾಜೇಗೌಡ, ಪತ್ನಿ ಪುಷ್ಪಾ, ಪುತ್ರ ರಾಜದೇವ್ ಟಿ.ಆರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರ ದುರುಬಳಕೆ ಮಾಡಿಕೊಂಡು ಸರ್ಕಾರಕ್ಕೆ ಹಾಗೂ ಆದಾಯ ತೆರಿಗೆ ಇಲಾಖೆಗೆ ಮೋಸ ಮಾಡಿದ್ದಾರೆ ಎಂದು ದಿನೇಶ್ ದೂರು ನೀಡಿದ್ದರು.