ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ಕಲಬುರಗಿ ಎನ್ ಜಿಒ ಕಾಲೋನಿಯಲ್ಲಿರುವ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್.ಪಿ ಜಾಧವ ಅವರ ಮನೆ, ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ. 300 ಗ್ರಾಂ ಚಿನ್ನಾಭರಣ, ಬೆಳ್ಳಿ, ಕಾರು, ಬೈಕ್ ಸೇರಿದಂತೆ ಇತರೆ ದಾಖಲೆಗಳು ಪತ್ತೆಯಾಗಿವೆ. ಪಾಲಿಕೆಯ ಕಚೇರಿ ಮೇಲೂ ದಾಳಿ ನಡೆಸುವ ಸಂಭವವಿದೆ.
ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್ ನೇತೃತ್ವದ ಮೂರು ತಂಡ ದಾಳಿ ಮಾಡಿದೆ. ಮನೆ ಹಾಗೂ ಫರಹತಾಬಾದ್ ಹತ್ತಿರ ಇರುವ ಫಾರ್ಮ್ ಹೌಸ್ ಮೇಲೆ ಸಹ ದಾಳಿ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ವರ್ಷಗಳಿಂದ ಮಹಾನಗರ ಪಾಲಿಕೆ ಉಪ ಆಯುಕ್ತರಾಗಿ ಕೆಲಸ ಮಾಡುತ್ತಿದ್ದಾರೆ.