ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸ್ಲಂ ಬೋರ್ಡ್ ನಲ್ಲಿ ಮನೆ ಪಡೆಯಲು ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಹಾಕಿದ ವ್ಯಕ್ತಿಯಿಂದ ಲಂಚ ಪಡೆದ ಪ್ರಕರಣ ಸಂಬಂಧ ಡಿಸಿಆರ್ ಬಿ(DCRB Police) ಪೊಲೀಸ್ ಇನ್ಸ್ ಪೆಕ್ಟರ್ ಗೀತಾ ಎಂಬುವರು ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಲೋಕೇಶ್ ಎನ್ನುವ ವ್ಯಕ್ತಿಯಿಂದ 25 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 10 ಸಾವಿರ ರೂಪಾಯಿಯನ್ನು ಪೋನ್ ಪೇ ಮೂಲಕ ಮಾಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಲಂಚಕ್ಕೆ ಬೇಡಿಕೆ ಇಟ್ಟು ಮುಂಗಡ 10 ಸಾವಿರ ರೂಪಾಯಿ ಪಡೆದ ಡಿಸಿಎಆರ್ ಬಿ ಪೊಲೀಸ್ ಇನ್ಸ್ ಪೆಕ್ಟರ್ ಗೀತಾ ವಿರುದ್ಧ ಲೋಕೇಶ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಗೀತಾ ಅವರನ್ನು ಹಿಡಿದಿದ್ದಾರೆ. ಈಗ ಈ ಕುರಿತು ತನಿಖೆ ನಡೆಸಲಾಗುತ್ತಿದೆ.