ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 8 ಕಡೆ ಬುಧವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ 8 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಿಸಿದ ಜಾಗಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸಾರಿಗೆ ಇಲಾಖೆಯ ಜಂಟಿ ನಿರ್ದೇಶಕಿ ಶೋಭಾ, ತುಮಕೂರಿನ ನಿವೃತ್ತ ಆರ್.ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ಬೀದರ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರವೀಂದ್ರ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ, ಬೆಳಗಾವಿಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ಗದಗ-ಭಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ ಬಂಡಿವಡ್ಡರ್, ಚಿಕ್ಕಮಗಳೂರಿನ ಕಡೂರು ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್ ಸೇರಿ 8 ಅಧಿಕಾರಿಗಳ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.