ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ್ ನಾಟಿಕಾರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದು ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ.ಪ್ರಭು ಅವರ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಲಾಗಿದೆ. ಆಂಜನೇಯ ಬಡಾವಣೆಯಲ್ಲಿರುವ ಮನೆ, ಕಚೇರಿ, ದೊಡ್ಡಘಟ್ಟ ಗ್ರಾಮದಲ್ಲಿನ ತೋಟದ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಮಡಕೇರಿಯ ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ್ ಅವರ ವಸತಿ ನಿಲಯ ಹಾಗೂ ಮೈಸೂರಿನಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನ ಹೂಟಗಳ್ಳಿ ನಗರಸಭೆಯ ಕಂದಾಯ ನಿರೀಕ್ಷಕ ರಾಮಸ್ವಾಮಿ ಅವರ ಮನೆಯ ಮೇಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.




