Ad imageAd image

ಸಬ್ ರಿಜಿಸ್ಟರ್ ಹಾಗೂ ಪಶು ವೈದ್ಯಾಧಿಕಾರಿ ಮೇಲೆ ಲೋಕಾಯುಕ್ತ ದಾಳಿ

Nagesh Talawar
ಸಬ್ ರಿಜಿಸ್ಟರ್ ಹಾಗೂ ಪಶು ವೈದ್ಯಾಧಿಕಾರಿ ಮೇಲೆ ಲೋಕಾಯುಕ್ತ ದಾಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಶುಕ್ರವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದೆ. ಅದೇ ರೀತಿ ಇಲ್ಲಿನ ಬೆಳಗಾವಿ ಉತ್ತರ ಸಬ್ ರಿಜಿಸ್ಟರ್(Sub Registrar) ಸಚಿನ್ ಮುಂಡೇದ್ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ(Veterinarian) ಸಂಜಯ್ ದುರ್ಗನ್ನವರ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆದಿದೆ. ಬೆಲ್ಲದ ಬಾಗೇವಾಡಿ, ಹಾರೋಗೇರಿ, ಅನಗೋಳ ಸೇರಿದಂತೆ ವಿವಿಧ ಕಡೆ ದಾಳಿ ನಡೆಸಲಾಗಿದ್ದು, ಅಕ್ರಮ ಕುಳಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article