ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದ ವಿವಿಧ ಕಡೆ ಲೋಕಾಯುಕ್ತ(Lokayukta) ಅಧಿಕಾರಿಗಳು ಶುಕ್ರವಾರ ಮುಂಜಾನೆ ದಾಳಿ ನಡೆಸಿದ್ದಾರೆ. ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವು ಕಡೆ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಗ್ರಾಮ ಪಂಚಾಯ್ತಿಯ ಪಿಡಿಒ(PDO) ಎಸ್.ಪಿ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಆಸ್ತಿ ಹೊಂದಿರುವ ಆರೋಪದ ಹಿನ್ನಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.