ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 40 ಕಡೆ ಮಂಗಳವಾರ ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಗಳ 9 ಅಧಿಕಾರಿಗಳು, ಅವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಗದು, ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.
ಹಾವೇರಿ, ಬೆಳಗಾವಿ, ಧಾರವಾಡ, ದಾವಣಗೆರೆ, ರಾಮನಗರ, ಮೈಸೂರು, ಕಲಬುರಗಿ ಜಿಲ್ಲೆಗಳ 9 ಅಧಿಕಾರಿಗಳ ಕಚೇರಿ, ಮನೆ, ಇವರ ಆಪ್ತರ, ಸಂಬಂಧಿಕರ ಮನೆಗಳು ಸೇರಿದಂತೆ 40 ಕಡೆ ದಾಳಿ ನಡೆಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮ, ಅಪಾರ್ಟ್ ಮೆಂಟ್ ನಿರ್ಮಾಣ, ಬಡಾವಣೆಗಳ ನಿರ್ಮಾಣ ಸೇರಿದಂತೆ ವಿವಿಧ ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿದೆ.