ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಗದಗ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿನ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಯ ಮೇಲೆ ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯ್ ಪ್ರಕಾಶ್ ಗೆ ಸಂಬಂಧಿಸಿದ ಐದು ಕಡೆ ದಾಳಿ ನಡೆಸಲಾಗಿದೆ. ಯಲಹಂಕ, ನಾಗರಭಾವಿ, ಗೋವಿಂದರಾಜನಗರ ಸೇರಿದಂತೆ ಒಟ್ಟು ಐದು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ, ಈ ದಾಳಿಗಳಿಂದ ಏನು ಬದಲಾವಣೆಯಾಗುತ್ತಿದೆ ಅನ್ನೋ ಪ್ರಶ್ನೆ ಜನರಲ್ಲಿದೆ.