ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಯಾದಗಿರಿ, ವಿಜಯಪುರ ಹಾಗೂ ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 12 ಕಡೆ, ಬೆಂಗಳೂರು ಗ್ರಾಮಾಂತರ 8 ಕಡೆ, ತುಮಕೂರು 7 ಕಡೆ, ಯಾದಗಿರಿಯಲ್ಲಿ 5, ವಿಜಯಪುರ ಹಾಗೂ ಮಂಗಳೂರಲ್ಲಿ 4 ಕಡೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ವಿವಿಧ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.