Ad imageAd image

ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸುವ ಕೆಲಸ ಮಾಡಿ: ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ

ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು

Nagesh Talawar
ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸುವ ಕೆಲಸ ಮಾಡಿ: ಲೋಕಾಯುಕ್ತ ನ್ಯಾ.ಬಿ.ಎಸ್ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಗ್ರಾಮ ಮಟ್ಟದ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಆದ್ಯತೆ ಮೇಲೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯನ್ನು ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು. ಜಿಲ್ಲೆಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅವರು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಅವಿಭಕ್ತ ಕುಟುಂಬಗಳು ವಾಸಿಸುತ್ತಿದ್ದು, ಇಂತಹ ಕುಟುಂಬಗಳಿಗೆ ಸಮುದಾಯ ಶೌಚಾಲಯ ನಿರ್ಮಿಸಿ, ಸೌಕರ್ಯಗಳನ್ನು ಒದಗಿಸುವುದನ್ನು ಸಂಬಂಧಿಸಿದ  ಗ್ರಾಮ ಪಂಚಾಯತಿಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ನಿಗದಿತ ನಮೂನೆಯನ್ನು ರೂಪಿಸಿಕೊಂಡು ಜಿಲ್ಲೆಯಾದ್ಯಂತ ಶೌಚಾಲಯ ಬಳಸದೇ ಇರುವ ಕುಟುಂಬಗಳನ್ನು ಗುರುತಿಸಿ ತಿಳುವಳಿಕ-ಜಾಗೃತಿ ಮೂಡಿಸಬೇಕು. ಈ ಕುರಿತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.

ನಗರ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಅಧಿಕಾರಿಗಳು ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಬೇಕು. ಶ್ರದ್ಧೆಯಿಂದ ಆತ್ಮಸಾಕ್ಷಿಗನುಗುಣವಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಆಡಳಿತ ನೀಡಲು ಮುಂದಾಗುವಂತೆ ಅವರು ಸಲಹೆ ನೀಡಿದರು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿ ದುಶ್ಚಟಗಳ ಕಡಿವಾಣಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದ ಅವರು, ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಸಾಮಾಜಿಕ ಬದ್ಧತೆಯನ್ನಾಗಿ ಪರಿಗಣಿಸಿ ಕಾರ್ಯಕ್ರಮ ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಅವರು ಹೇಳಿದರು.

ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿದ್ಯುತ್ ಪರಿವರ್ತಕಗಳಿಗೆ ರೈತರು ಹೆಸ್ಕಾಂಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಪರಿಶೀಲನೆ ನಡೆಸಿ, ಆದ್ಯತೆ ಮೇಲೆ ರೈತರ ಬೇಡಿಕೆಗನುಗುಣವಾಗಿ ವಿದ್ಯುತ್ ಪರಿವರ್ತಕಗಳನ್ನು ಒದಗಿಸಲು ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ವಹಿಸಬೇಕು. ಬಾಕಿ ಇರುವ ಅರ್ಜಿಗಳ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಹೆಸ್ಕಾಂ ಅಧೀಕ್ಷಕ ಅಭಿಯಂತರರಿಗೆ ಸೂಚನೆ ನೀಡಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ಕಬ್ಬು ಪೂರೈಸುವ ರೈತರಿಗೆ ನಿಗದಿತ ದರ ಪಾವತಿಸಲು ಕ್ರಮ ವಹಿಸಬೇಕು. ಕಬ್ಬು ಪೂರೈಸುವ ರೈತರಿಗೆ ತೂಕದಲ್ಲಿ ಯಾವುದೇ ತೊಂದರೆಯಾಗದAತೆ ನೋಡಿಕೊಂಡು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸಿಸಿಟಿವಿ ನಿಗಾವಣೆಯಲ್ಲಿ ತೂಕ ಮಾಡಬೇಕು. ಕಾರ್ಖಾನೆಗಳು ರೈತರಿಗೆ ನಿಗದಿತ ಅವಧಿಯಲ್ಲಿ ಹಣ ಸಂದಾಯ ಮಾಡಬೇಕು. ಸಕ್ಕರೆ ಕಾರ್ಖಾನೆಗಳಿಗೆ ಅಧಿಕಾರಿಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article