ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಭಾನುವಾರ ನಸುಕಿನಜಾವ ಸಂಪಿಗೆನಗರದ ಬಳಿ ನಡೆದಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಕೆಲಗೇರಿಯ ಮಾರುತಿ ಹಂಚಿನಮನಿ, ಮರೆವ್ವ ಹಂಚಿನಮನಿ ಮೃತರೆಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಧಾರವಾಡ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಠಾಣೆ ಪೊಲೀಸರು ಈ ಕುರಿತು ಪರಿಶೀಲನೆ ನಡೆಸಿದ್ದಾರೆ.