ಪ್ರಜಾಸ್ತ್ರ ಸುದ್ದಿ
ಆಂಧ್ರಪ್ರದೇಶ(Andra Pradesh): ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಕಾಣಿಪಾಕಂನಲ್ಲಿ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಗಾಯಗೊಂಡವರ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಮಹಿಳೆಯರು, ಇಬ್ಬರು ಪುರುಷರ ಹಾಗೂ ಓರ್ವ ಮಗು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರಂತೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಹೇಗಾಯ್ತು ಅನ್ನೋದರ ಕುರಿತು ತನಿಖೆ ನಡೆಯುತ್ತಿದೆ.